Basavanna information in kannada ಧರ್ಮ ಗುರು ಬಸವಣ್ಣನವರ ವಚನಗಳು
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, “ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.
ಸಾಂಪ್ರದಾಯಿಕ ದಂತಕಥೆಗಳು ಮತ್ತು ವಿದ್ವತ್ಪೂರ್ಣ ಗ್ರಂಥಗಳು ಲಿಂಗಾಯತ ಸ್ಥಾಪಕ ಬಸವಣ್ಣ ಎಂದು ಉಲ್ಲೇಖಿಸುತ್ತವೆ . ಆದಾಗ್ಯೂ, ಆಧುನಿಕ ಕಲಾಚುರಿ ಶಾಸನಗಳಂತಹ ಐತಿಹಾಸಿಕ ಸಾಕ್ಷ್ಯವನ್ನು ಅವಲಂಬಿಸಿದೆ ಬಸವ ಕವಿ ತತ್ತ್ವಜ್ಞಾನಿಯಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಪ್ರದಾಯವನ್ನು ಸಂಸ್ಕರಿಸಿದರು ಮತ್ತು ಶಕ್ತಿಯನ್ನು ತುಂಬಿದರು ಎಂದು ಉಲ್ಲೇಖಿಸುತ್ತವೆ.ಕನ್ನಡ ಕವಿ ಹರಿಹರರಿಂದ ರಚಿತ (c.೧೧೮೦) ಬಸವರಾಜದೇವರ ರಗಳೆ (ಸಿ.ಎಸ್ .೮೦೮೦ ರಲ್ಲಿ ೨೫ ವಿಭಾಗಗಳು ಲಭ್ಯವಿದೆ) ಸಾಮಾಜಿಕ ಸುಧಾರಕನ ಜೀವನದ ಬಗ್ಗೆ ಲಭ್ಯವಿರುವ ಅತ್ಯಂತ ಆರಂಭಿಕ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನ ಸಮೀಪದಲ್ಲಿದ್ದ ಕಾರಣದಿಂದಾಗಿ ಅದು ಮುಖ್ಯವೆಂದು ಪರಿಗಣಿಸಲಾಗಿದೆ.ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರ ೧೩ ನೇ ಶತಮಾನದ ಪವಿತ್ರ ತೆಲುಗು ಪಠ್ಯ ಪಾಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ನಿರೂಪಿಸಲ್ಪಟ್ಟಿದೆ. ಬಸವ ಸಾಹಿತ್ಯ ಕೃತಿಗಳು ಕನ್ನಡ ಭಾಷೆಯಲ್ಲಿ ವಚನ ಸಾಹಿತ್ಯವನ್ನು ಒಳಗೊಂಡಿದೆ.ಅವರನ್ನು ಭಕ್ತಿಭಂಡಾರಿ ಎಂದೂ ಕರೆಯುತ್ತಾರೆ (ಅಕ್ಷರಶಃ, ಭಕ್ತಿಯ ಖಜಾಂಚಿ),ಬಸವಣ್ಣ (ಹಿರಿಯ ಸಹೋದರ ಬಸವ) ಅಥವಾ ಬಸವೇಶ್ವರ.
ವಿಶೇಷ ಮಾಹಿತಿ:- ಬಸವಣ್ಣನವರನ್ನು “ಕರ್ನಾಟಕದ ಮಾರ್ಟಿನ್ ಲೂಥರ್” ಎಂದು ಕರೆಯುತ್ತಾರೆ. ಹೀಗೆ ಕರೆದವರು “ಸರ್ ಅರ್ಥರ್ ಮೈಲರ್”.
ಬಸವಣ್ಣನವರ 10 ವಚನಗಳು
ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ನಿಮ್ಮ ನಿಲುವು ಕೂಡಲಸಂಗಮದೇವಾ, ಕನ್ಯೆಯ ಸ್ನೇಹದಂತಿದ್ದಿತ್ತು.
ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ, ಮುನ್ನ, – ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ.
ಎಂತಕ್ಕೆ ಎಂತಕ್ಕೆ ನಾ ನಿಮ್ಮ ದೇವರೆಂದರಿದೆನು,
ಇಂತಾಗಿ ನೀವೆನ್ನನಾರೆಂದರಿುರಿ. ನಂಬಲರಿಯೆ, ನಂಬಿಸಲರಿಯೆ. ಒಲಿಯಲರಿಯೆ, ಒಲಿಸಲರಿಯೆ.
ಯಥಾ ಭಾವಸ್ತಥಾ ಲಿಂಗಂ ಸತ್ಯಂ ಸತ್ಯಂ ನ ಸಂಶಯಃ
ಯಥಾ ಭಕ್ತಿಸ್ತಥಾ ಸಿದ್ಧಿ:ಸತ್ಯಂ ಸತ್ಯಂ ನ ಸಂಶಯಃ ಎಂದುದಾಗಿ,
ಕೂಡಲಸಂಗಮದೇವಾ, ಕೇಳಯ್ಯಾ ಕೋಟಿ ಕೋಟಿ ವರುಷ ಕೋಟಲೆಗೊಂಡೆನಯ್ಯಾಅರಿವುವಿಡಿದು, ಅರಿವನರಿದು,
ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ,
ಮರಹುವಿಡಿದು, ಮರಹ ಮರೆದು,
ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ.
ದೇಹ ಪ್ರಾಣಂಗಳ ಹಿಂಗಿ, ದೇಹವಿಡಿದು,
ದೇಹ ನಿಮ್ಮದೆಂಬ ಭ್ರಾಂತುಸೂತಕಿ ನಾನಲ್ಲವಯ್ಯಾ.
ನಿಮ್ಮ ಅರಿದ ಅರಿವ ಭಿನ್ನವಿಟ್ಟ ಕಂಡೆನಾದಡೆ
ನಿಮ್ಮಾಣೆ ಕಾಣಾ, ಕೂಡಲಸಂಗಮದೇವಾ.
ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ, ಪ್ರಥಮ ಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿಯೆನ್ನ ನಿರಿಸಿಕೊಂಡಿರ್ದಿರಯ್ಯಾ, ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿಸಿಕೊಂಡಿರ್ದಿರಯ್ಯಾ, ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಲೀಲಾ ವಿನೋದದಿಂದಿರಿಸಿಕೊಂಡಿರ್ದಿರಯ್ಯಾ, ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಶ್ಹಭನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮೊಕ್ಕುದಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ.
ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ.
’ಕರಿಘನ ಅಂಕುಶ ಕಿರಿದೆ’ನ್ನಬಹುದೆ? ಬಾರದಯ್ಯಾ. ’ಗಿರಿಘನ ವಜ್ರ ಕಿರಿದೆ’ನ್ನಬಹುದೆ? ಬಾರದಯ್ಯಾ. ತಮ್ಮಂಥ ಘನ ಜ್ಯೋತಿ ಕಿರಿದೆನ್ನಬಹುದೆ? ಬಾರದಯ್ಯ. ’ಮರಹು ಘನ ನಿಮ್ಮ ನೆನೆವ ಮನ ಕಿರಿದೆ’ನ್ನಬಹುದೆ? ಬಾರದಯ್ಯಾ ಕೂಡಲಸಂಗಮದೇವಾ.
ಭವಬಂಧನ ಭವಪಾಶವಾದ ಕಾರಣವೇನಯ್ಯಾ? ಹಿಂದಣ ಜನ್ಮದಲಿ ಲಿಂಗವ ಮರೆದೆನಾಗಿ, ಹಿಂದಣ ಸಿರಿಯಲ್ಲಿ ಜಂಗಮನ ಮರೆದೆನಾಗಿ ಅರಿದೋಡೀ ಸಂಸಾರವ ಹೊದ್ದಲೀವನೆ ಕೂಡಲಸಂಗಮದೇವಾ.
ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ! ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ? ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ? ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ?
Small basavanna vachanagalu in kannada
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ! ಇಂದೆನ್ನ ದೇಹಕ್ಕೆ ಗ್ರಹಣವಾಯಿತು, ಇನ್ನೆಂದಿಗೆ ಮೋಕ್ಶವಹುದೋ ಕೂಡಲಸಂಗಮದೇವಾ
ಎಂತಹವನಾದಡೇನು, ಲಿಂಗವ ಮುಟ್ಟದವನೆ ಕೀಳುಜಾತಿ.
ಕುಲವಹುದು ತಪ್ಪದು ಲಿಂಗ ಮುಟ್ಟಲೊಡನೆ,
ಹೊನ್ನಹುದು ತಪ್ಪದು ಪರುಷ ಮುಟ್ಟಲೊಡನೆ.
ಕೂಡಲಸಂಗಮದೇವನೊಲ್ಲ ಸರ್ವಸಂದೇಹಿಗಳ.
ಕನ್ನಡಿಯ ನೋಡುವ ಅಣ್ಣಗಳಿರಾ, ಜಂಗಮವ ನೋಡಿರೆ,
ಜಂಗಮದೊಳಗೆ ಲಿಂಗಯ್ಯ ಸನ್ನಹಿತನಾಗಿಪ್ಪ.
`ಸ್ಥಾವರ ಜಂಗಮ ಒಂದೆ’ ಎಂದುದು ಕೂಡಲಸಂಗನ ವಚನ.ಎಂದೊ, ಸಂಸಾರದ ದಂದುಗ ಹಿಂಗುವುದು ?
ಎಂದೊ, ಮನದಲ್ಲಿ ಪರಿಣಾಮವಹುದೆನಗೆಂದೋ, ಎಂದೋ ?
ಕೂಡಲಸಂಗಮದೇವಾ,
ಇನ್ನೆಂದೋ ಪರಮಸಂತೋಷದಲ್ಲಿಹುದೆನಗೆಂದೋ
ಕಬ್ಬುನ ಪರುಷವೇಧಿಯಾದಡೇನು,
ಕಬ್ಬುನ ಹೊನ್ನಾಗದಡಾ ಪರುಷವದೇಕೊ
ಮನೆಯೊಳಗೆ ಕತ್ತಲೆ ಹರಿಯದೊಡಾ ಜ್ಯೋತಿಯದೇಕೊ
ಕೂಡಲಸಂಗಮದೇವರ ಮನಮುಟ್ಟಿ ಪೂಜಿಸಿ
ಕರ್ಮ ಹರಿಯದೊಡಾ ಪೂಜೆಯದೇಕೊಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ, ಎನ್ನನು ಕಾಯಯ್ಯಾ ಸಂಗಮದೇವಾ ಹುರುಳಿಲ್ಲ ಹುರುಳಿಲ್ಲ! ಶಿವಧೋ! ಶಿವಧೋ!
Basavanna vachanagalu in kannada with meaning
ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ
ಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ
ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ
ನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆ
ಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.
ಅಸ್ತಿ ಭಾತಿಯೆಂಬ ಭಿತ್ತಿಯ ಮೇಲೆ,
ಕ್ರೀ ನಾಮ ರೂಪವೆಂಬ ಚಿತ್ರ ಬರೆಯಿತ್ತು.
ಇಲ್ಲದ ಭಿತ್ತಿಯ ಮೇಲೆ ಉಂಟೆಂಬ ಚಿತ್ರದಂತಿರ್ದಿತ್ತು.
ಅದೆಂತೆಂದಡೆ;
ಅಸ್ತಿ ಭಾತಿ ಪ್ರಿಯಂ ರೂಪಂ ನಾಮ ಚೇತ್ಯಂಶಪಂಚಕಂ
ಆದ್ಯತ್ರಯಂ ಬ್ರಹ್ಮರೂಪಂ ಮಾಯಾರೂಪಂ ತತೋದ್ವಯಂ
ಎಂದುದಾಗಿ-
ಎನಗಿದೇ ಮಾಯೆಯಾಗಿ ಕಾಡಿತ್ತು, ಕೂಡಲಸಂಗಮದೇವಾ. /161
ಎನ್ನ ಚಿತ್ತವು ಅತ್ತಿಯ ಹಣ್ಣು, ನೋಡಯ್ಯಾ,
ವಿಚಾರಿಸಿದಡೆ ಏನೂ ಹುರುಳಿಲ್ಲಯ್ಯಾ.
ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಪುಮಾಡಿ ನೀವಿರಿಸಿದಿರಿ,
ಕೂಡಲಸಂಗಮದೇವಾ.
ಅಹಂಕಾರ ಮನವನಿಂಬುಗೊಂಡಲ್ಲಿ ಲಿಂಗ ತಾನೆಲ್ಲಿಪ್ಪುದೊ
ಅಹಂಕಾರಕ್ಕೆ ಎಡೆಗೊಡದೆ ಲಿಂಗತನುವಾಗಿರಬೇಕು.
ಅಹಂಕಾರರಹಿತವಾದಲ್ಲಿ ಸನ್ನಹಿತ ಕಾಣಾ
ಕೂಡಲಸಂಗಮದೇವ.
ಅಹುದಹುದು;
ಕೆರೆಯ ತಪ್ಪಿ ಬಾವಿಯ ಬಿದ್ದಂತೆ,
ಮುಳ್ಳ ಕಳೆದು ದಸಿಯ ಬೆಟ್ಟಿದಂತೆ,
ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ,
ಕೂಡಲಸಂಗಮದೇವಾ
ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
ಅಹುದಹುದು;
ಕೆರೆಯ ತಪ್ಪಿ ಬಾವಿಯ ಬಿದ್ದಂತೆ,
ಮುಳ್ಳ ಕಳೆದು ದಸಿಯ ಬೆಟ್ಟಿದಂತೆ,
ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ,
ಕೂಡಲಸಂಗಮದೇವಾ
ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
ಅಹುದೆಂದರಿಯೆ, ಆಗದೆಂದರಿಯೆ,
ಆದಿಪಥವ ತೋರಲರಿಯೆ,
ಸತ್ಯವನರಿಯೆ, ಸಹಜವನರಿಯೆ,
ಸಜ್ಜನ ಶುದ್ಧವ ಮುನ್ನರಿಯೆ.
ನಿಮ್ಮ ಶರಣರ ಒಕ್ಕುದನುಂಡಿಪ್ಪೆ
ಕೂಡಲಸಂಗಮದೇವಾ.
ಅಂಗದ ಮೇಲೆ ಲಿಂಗ ಆಯತವಾಗಿ
ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು,
ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ
ಎನ್ನಂತರಂಗ ಶುದ್ಧವ ಮಾಡಿ
ಲಿಂಗೈಕ್ಯದ ಹೊಲಬ ತೋರಿದನಯ್ಯಾ, ಚೆನ್ನಬಸವಣ್ಣನು. ಕಾಯದ ಕಳವಳವು
ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು
ಜಂಗಮಮುಖಲಿಂಗವಾಗಿ ಬಂದು
ಎನ್ನ ಶಿಕ್ಷಿಸಿ ರಕ್ಷಿಸಿ
ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು.
ಕೂಡಲಸಂಗಮದೇವರಲ್ಲಿ
ಪ್ರಭುದೇವರ ಚೆನ್ನಬಸವಣ್ಣನ
ಕರುಣದಿಂದಲಾನು ಬದುಕಿದೆನು
ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆನಗಾಯಿತ್ತಯ್ಯಾ! ಅಕಟಕಟಾ ಸಂಸಾರ ವೃಥಾ ಹೋಯಿತಲ್ಲಾ! ಕರ್ತುವೇ ಕೂಡಲಸಂಗಮದೇವಾ ಇವ ತಪ್ಪಿಸಿ ಎನ್ನನು ರಕ್ಶಿಸಯ್ಯಾ.
ಶೂಲದ ಮೇಲಣ ವಿಭೋಗವೇನಾದೊಡೇನೋ? ನಾನಾವರ್ಣದ ಸಂಸಾರ ಹಾವ-ಹಾವಡಿಗನ ಸ್ನೇಹದಂತೆ! ತನ್ನಾತ್ಮ ತನಗೆ ಹಗೆಯಾದ ಬಳಿಕ ಬಿನ್ನಾಣವುಂಟೆ! ಮಹಾದಾನಿ ಕೂಡಲಸಂಗಮದೇವಾ.
ಅಳವಡಿಸಿದ ಪದಾರ್ಥ ಅರ್ಪಿತಕ್ಕೆ ಸರಿಯಾಯಿತ್ತು,
ಅಳವಡಿಸದ ಮುನ್ನವೆ ಕೈಕೊಳ್ಳುತ್ತೈದಾನೆ ಶಿವನು,
ಸಂದ ಪದಾರ್ಥ ಸಲ್ಲಲಿ.
ಕೂಡಲಸಂಗಮದೇವರ ಆರೋಗಣೆಯ ಅವಸರಕ್ಕೆ
ಸಂಚಿತ ಸಯದಾನವ ತೆಗೆಸಿರೆ, ಸೊಡ್ಡಳ ಬಾಚರಸೆರೆ.ಅಳಿಯನ ಕಂಡಡೆ ನಾಚೆಂಬೆ ಮಗಳೆ,
ಅಳಿಯನ ಕಂಡಡೆ ತೊಲಗೆಂಬೆ ಮಗಳೆ,
ನಾಚುವಡೆ ಮೊರೆಯಿಲ್ಲ, ತೊಲಗುವಡೆ ನೆಲನಿಲ್ಲ.
ಇಬ್ಬರಿಗೊಬ್ಬ ಗಂಡನಾದ ಬಳಿಕ
ಇನ್ನೆಲ್ಲಿಯ ಮೊರೆ ಮಗಳೆ
ಕೂಡಲಸಂಗಮದೇವಯ್ಯನೆಂಬ ಗಂಡನಾದ ಬಳಿಕ
ಇನ್ನೆಲ್ಲಿಯ ಮೊರೆ ಮಗಳೆಆತ್ಮ ಲಿಂಗ, ಪರಮಾತ್ಮ ಜಂಗಮ,
ತನು ಮಧ್ಯೆ ಪ್ರಸಾದವಾಯಿತ್ತು,
ನಿಶ್ಚಿಂತ ನಿವಾಸವಾಯಿತ್ತು.
ಕೂಡಲಸಂಗನ ಶರಣರ ಸಂಗದಿಂದ
ನಿಶ್ಚಿಂತ ನಿವಾಸವಾಯಿತ್ತು.ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ! ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ! ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾ.
ಅರಿಯದೆ ಜನನಿಯ ಜಠರದಲ್ಲಿಬಾರದ ಭವಂಗಳ ಬರಿಸಿದೆ ತಂದೆ,ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ, ನಿಮ್ಮಾಣೆ.
ಎಂದೊ, ಸಂಸಾರದ ದಂದುಗ ಹಿಂಗುವುದು ?ಎಂದೊ, ಮನದಲ್ಲಿ ಪರಿಣಾಮವಹುದೆನಗೆಂದೋ, ಎಂದೋ ?ಕೂಡಲಸಂಗಮದೇವಾ,ಇನ್ನೆಂದೋ ಪರಮಸಂತೋಷದಲ್ಲಿಹುದೆನಗೆಂದೋ.
ಲೇಸ ಕಂಡು ಮನ ಬಯಸಿ ಬಯಸಿಆಸೆ ಮಾಡಿದಡಿಲ್ಲ ಕಂಡಯ್ಯಾ.ತಾಳಮರಕ್ಕೆ ಕೈಯ ನೀಡಿಮೇಲೆ ನೋಡಿ ಗೋಣು ನೊಂದುದಯ್ಯಾ.ಕೂಡಲಸಂಗಮದೇವಾ ಕೇಳಯ್ಯಾ,ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ !
ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕಇನ್ನು ಬಯಸಿದಡುಂಟೆ ?ಭಕ್ತಿಯುಳ್ಳವರ ನೋಡಿ ನೋಡಿ ಬಯಸಿದಡುಂಟೆ,ಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕ?
ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ,ಚಂದ್ರ ಕುಂದೆ, ಕುಂದುವುದಯ್ಯಾ.ಚಂದ್ರಂಗೆ ರಾಹು ಅಡ್ಡ ಬಂದಲ್ಲಿಅಂಬುದ್ಥಿ ಬೊಬ್ಬಿಟ್ಟಿತ್ತೆ ಅಯ್ಯಾಅಂಬುದ್ಥಿಯ ಮುನಿ ಆಪೋಶನವ ಕೊಂಬಲ್ಲಿಚಂದ್ರಮನಡ್ಡ ಬಂದನೆ, ಅಯ್ಯಾ ?ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ,ಜಗದ ನಂಟ ನೀನೆ, ಅಯ್ಯಾ,ಕೂಡಲಸಂಗಮದೇವಯ್ಯಾ!
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆಧರೆ ಹತ್ತಿ ಉರಿದಡೆ ನಿಲಲುಬಾರದು.ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ,ನಾರಿ ತನ್ನ ಮನೆಯಲ್ಲಿ ಕಳುವಡೆ,ತಾಯ ಮೊಲೆವಾಲು ನಂಜಾಗಿ ಕೊಲುವಡೆ,ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ !
ಎನ್ನ ಗುಣ ಅವಗುಣವ ಸಂಪಾದಿಸುವೆ ಅಯ್ಯಾ !ಸರಿಯೆ, ಅಪ್ರತಿಮಹಿಮಾ, ನಿಮಗಾನು ಪ್ರತಿಯೆಕೂಡಲಸಂಗಮದೇವಾ ನೀವು ಮಾಡಲಾನಾದೆನು.
ಬೆದಕದಿರು ಬೆದಕದಿರು, ಬೆದಕಿದಡೆ ಹುರುಳಿಲ್ಲ,ಚಿತ್ತರಟ್ಟೆಯ ಕಾಯಲ್ಲಿ ಮತ್ತೇನನರಸುವಿರಯ್ಯಾನಿಮ್ಮ ಉತ್ತಮಿಕೆಯ ಪೂರೈಸುವುದುಕೂಡಲಸಂಗಮದೇವಾ.28ಎನ್ನ ಚಿತ್ತವು ಅತ್ತಿಯ ಹಣ್ಣು, ನೋಡಯ್ಯಾ,ವಿಚಾರಿಸಿದಡೆ ಏನೂ ಹುರುಳಿಲ್ಲಯ್ಯಾ.ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಪುಮಾಡಿ ನೀವಿರಿಸಿದಿರಿ,ಕೂಡಲಸಂಗಮದೇವಾ.
ಎನ್ನ ನಡೆಯೊಂದು ಪರಿ, ಎನ್ನ ನುಡಿಯೊಂದು ಪರಿ,ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.ನುಡಿಗೆ ತಕ್ಕ ನಡೆಯ ಕಂಡಡೆಕೂಡಲಸಂಗಮದೇವನೊಳಗಿಪ್ಪನಯ್ಯಾ.
ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾ.ನಾಯಿಗೆ ನಾರಿವಾಣವಕ್ಕುವುದೆಕೂಡಲಸಂಗಮದೇವಾ.
ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು,ನಿಂದಲ್ಲಿ ನಿಲಲೀಯದೆನ್ನ ಮನವು,ಹೊಂದಿದಲ್ಲಿ ಹೊಂದಲೀಯದೆನ್ನ ಮನವುಕೂಡಲಸಂಗಮದೇವಾನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ.
ಮರನನೇರಿದ ಮರ್ಕಟನಂತೆಹಲವು ಕೊಂಬೆಗೆ ಹಾಯುತ್ತಲಿದ್ದೇನೆ,ಬೆಂದ ಮನವ ನಾನೆಂತು ನಂಬುವೆನಯ್ಯಾಎಂತು ನಚ್ಚುವೆನಯ್ಯಾಎನ್ನ ತಂದೆ ಕೂಡಲಸಂಗಮದೇವನಲ್ಲಿಗೆಹೋಗಲೀಯದಯ್ಯಾ.
ಅಂದಣವನೇರಿದ ಸೊಣಗನಂತೆಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು.ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು,ಮೃಡ ನಿಮ್ಮನನುದಿನ ನೆನೆಯಲೀಯದು.ಎನ್ನೊಡೆಯ ಕೂಡಲಸಂಗಮದೇವಾನಿಮ್ಮ ಚರಣವ ನೆನೆವಂತೆ ಕರುಣಿಸು-ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.
ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆ ಎನ್ನ ಬಾಳುವೆ.ಸಂಸಾರಸಂಗವ ಬಿಡದು ನೋಡೆನ್ನ ಮನವು.ಈ ನಾಯಿತನವ ಮಾಣಿಸು-ಕೂಡಲಸಂಗಮದೇವಯ್ಯಾ, ನಿಮ್ಮ ಧರ್ಮ.
ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ,ಎನ್ನ ಬಿಡು, ತನ್ನ ಬಿಡು ಎಂಬುದು ಕಾಯವಿಕಾರ,ಎನ್ನ ಬಿಡು, ತನ್ನ ಬಿಡು, ಎಂಬುದು ಮನೋವಿಕಾರ.ಕರಣೇಂದ್ರಿಯಂಗಳೆಂಬ ಸೊಣಗ ಮುಟ್ಟದ ಮುನ್ನಮನ ನಿಮ್ಮನೈದುಗೆ, ಕೂಡಲಸಂಗಮದೇವಾ.
ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ :ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ.ಬೆಂದ ಕರಣಾದಿಗಳು ಒಂದೆ ಪಥವನರಿಯವು,ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾಎನ್ನ ತಂದೆ ಕೂಡಲಸಂಗಮದೇವಾ,ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು.
ತನ್ನ ವಿಚಾರಿಸಲೊಲ್ಲದು, ಇದಿರ ವಿಚಾರಿಸಹೋಹುದೀ ಮನವು.ಏನ ಮಾಡುವೆನೀ ಮನವನು, ಎಂತು ಮಾಡುವೆನೀ ಮನವನು.ಕೂಡಲಸಂಗಮದೇವನ ಶರಣರನಚ್ಚದ ಮಚ್ಚದ ಬೆಂದ ಮನವನು.
ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು,ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.ಕೂಡಲಸಂಗನ ಶರಣರನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು.
ಸುಡಲೀ ಮನವೆನ್ನನುಡುಹನ ಮಾಡಿತ್ತು,ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು.ಬೆಡಗಿನ ಕೀಲು ಕಳೆದು ಕೆಡೆದ ಬಳಿಕಕಡುಗೂರ್ಪ ಮಡದಿ ತಾ ಮುಟ್ಟಲಮ್ಮಳು,ಒಡಲನುರಿಕೊಂಬುದು, ಒಡವೆಯನರಸ ಕೊಂಬ,ಕಡುಗೂರ್ಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕ,ಇನ್ನು ಮಾಡಿದರಳವೆ ಕೂಡಲಸಂಗಮದೇವಾ.
ವಚನದ ಹುಸಿ ನುಸುಳೆಂತು ಮಾಬುದೆನ್ನಮನದ ಮರ್ಕಟತನವೆಂತು ಮಾಬುದೆನ್ನಹೃದಯದ ಕಲ್ಮಷವೆಂತು ಮಾಬುದೆನ್ನಕಾಯವಿಕಾರಕ್ಕೆ ತರಿಸಲುವೋದೆನು,ಎನಗಿದು ವಿಧಿಯೇ, ಕೂಡಲಸಂಗಮದೇವಾ.
ಅಂಗದ ನಮಾಫಟವು ಸಿಂಗದ ಗಾತ್ರವು,ಹಿಂಗದು ಮನದಲ್ಲಿ ನಾನಾ ವಿಕಾರವು.ಬಂದೆಹೆನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ,ಮುಂದುಗಾಣದು ಲೋಕ,ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ,ಕೂಡಲಸಂಗಮದೇವಾ.
ವಿಕಳನಾದೆನು ಪಂಚೇಂದ್ರಿಯ ಸಪ್ತಧಾತುವಿನಿಂದ,ಮತಿಗೆಟ್ಟೆನು ಮನದ ವಿಕಾರದಿಂದ,ಧೃತಿಗೆಟ್ಟೆನು ಕಾಯವಿಕಾರದಿಂದ,ಧೃತಿಗೆಟ್ಟೆನು ಕಾಯವಿಕಾರದಿಂದ,ಶರಣುವೊಕ್ಕೆನು ಕೂಡಲಸಂಗಮದೇವಯ್ಯಾ.
ಮುನಿದೆಯಾದಡೆ ಒಮ್ಮೆ ಜರೆದಡೆ ಸಾಲದೆಅಕಟಕಟಾ, ಮದನಂಗೆ ಮಾರುಗೊಡುವರೆಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆಕೂಡಲಸಂಗಮದೇವಾ.
ಆನು ಒಬ್ಬನು, ಸುಡುವರೈವರು,ಮೇಲೆ ಕಿಚ್ಚು ಘನ, ನಿಲಲುಬಾರದು.ಕಾಡ ಬಸವನ ಹುಲಿ ಕೊಂಡೊಯ್ದಡೆಆರೈಯಲಾಗದೆ ಕೂಡಲಸಂಗಮದೇವಾ.
ಆಸೆ, ಆಮಿಷ, ತಾಮಸ, ಹುಸಿ, ವಿಷಯ,ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ-ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ.ಅದೇಕೆಂದಡೆ, ನಿನ್ನತ್ತಲೆನ್ನ ಬರಲೀಯವು.ಇದು ಕಾರಣ, ಇವೆಲ್ಲವ ಕಳೆದುಎನ್ನ ಪಂಚೈವರ, ಭಕ್ತರ ಮಾಡು ಕೂಡಲಸಂಗಮದೇವಾ.
ಎಂತು ಶಿವಭಕ್ತಿಯ ನಾನುಪಮಿಸುವೆನಯ್ಯಾಎಂತು ಶಿವಾಚಾರವೆನಗೆ ವೇದ್ಯವಪ್ಪುದೋ ಅಯ್ಯಾಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರದಿಂದ ಕಟ್ಟುವಡೆದೆನು.ಹಸಿವು, ತೃಷೆ, ವ್ಯಸನದಿಂದ ಕುದಿಯುತ್ತಿದ್ದೇನೆ.ಪಂಚೇಂದ್ರಿಯ, ಸಪ್ತಧಾತುಹರಿಹಂಚುಮಾಡಿ ಕಾಡಿಹವಯ್ಯಾ,ಅಯ್ಯಾ, ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾಕೂಡಲಸಂಗಮದೇವಾ, ನಾನೇವೆನೇವೆನಯ್ಯಾ.
ಕಾಯವಿಕಾರ ಕಾಡಿಹುದಯ್ಯಾ,ಮನೋವಿಕಾರ ಕೂಡಿಹುದಯ್ಯಾ.ಇಂದ್ರಿಯ ವಿಕಾರ ಸುಳಿವುದಯ್ಯಾ !ಸುಳುವಿನೊಳಗೆ ಸುಳಿವುತ್ತಲಿದ್ದೇನೆ, ಸಿಲುಕಿಸದಿರಯ್ಯಾ !ಅನ್ಯ ಚಿತ್ತದಲ್ಲಿರಿಸದಿರಯ್ಯಾ, ನಿಮ್ಮ ಚಿತ್ತದಲ್ಲಿರಿಸಯ್ಯಾ.ಅನುಪಮಸುಖಸಾರಾಯ ಶರಣರಲ್ಲಿ-ಕೂಡಲಸಂಗಮದೇವಯ್ಯಾ, ಇದನೆ ಬೇಡುವೆನಯ್ಯಾ.
ಬಂದ ಯೋನಿಯನರಿದು ಸಲಹೆನ್ನ ತಂದೆ.ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು,ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು,ಎನ್ನ ತಂದೆ ಕೂಡಲಸಂಗಮದೇವಾ, ಮಾಣಿಸು ನಿಮ್ಮ ಧರ್ಮ.
ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿತಿಳಿಯಲೀಯದು, ಎಚ್ಚರಲೀಯದು.ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ.
ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ.ಪಶುವೇನ ಬಲ್ಲುದು ಹಸುರೆಂದೆಠಸುವುದು.ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ,ಸುಬುದ್ಧಿಯೆಂಬ ಉದಕವನೆರೆದು,ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.
ಕೆಸರಲ್ಲಿ ಬಿದ್ದ ಪಶುವಿನಂತೆಆನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ, ಅಯ್ಯಾ.ಆರೈವವರಿಲ್ಲ, ಅಕಟಕಟ !ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ್ಕ.
ಬಡಪಶು ಪಂಕದಲ್ಲಿ ಬಿದ್ದಡೆಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆಶಿವ ಶಿವ ಹೋದೆಹೆ, ಹೋದೆಹೆನಯ್ಯಾ.ನಿಮ್ಮ ಮನದತ್ತಲೆನ್ನ ತೆಗೆಯಯ್ಯಾ.ಪಶುವಾನು, ಪಶುಪತಿ ನೀನು,ತುಡುಗುಣಿಯೆಂದು ಎನ್ನ ಹಿಡಿದು ಬಡಿಯದ ಮುನ್ನಒಡೆಯಾ ನಿಮ್ಮ ಬಯ್ಯದಂತೆ ಮಾಡು,ಕೂಡಲಸಂಗಮದೇವಾ.
ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆ`ಅಂಬೆ ಅಂಬೆ’ ಎಂದು ಕರೆವುತ್ತಲಿದ್ದೇನೆ,`ಅಂಬೆ ಅಂಬೆ’ ಎಂದು ಒರಲುತ್ತಲಿದ್ದೇನೆ,ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ.
ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ.ಓ ಎನ್ನಲಾಗದೆ ಅಯ್ಯಾಆಗಳೂ ನಿಮ್ಮ ಕರೆವುತ್ತಲಿದ್ದೇನೆಮೋನವೇ ಕೂಡಲಸಂಗಮದೇವಾ.
ನೀ ಹುಟ್ಟಿಸಿದಲ್ಲಿ ಹುಟ್ಟಿ,ನೀ ಕೊಂದಲ್ಲಿ ಸಾಯದೆ, ಎನ್ನ ವಶವೆ ಅಯ್ಯಾನೀವಿರಿಸಿದಲ್ಲಿ ಇರದೆ, ಎನ್ನ ವಶವೆ ಅಯ್ಯಾಅಕಟಕಟಾ, ಎನ್ನವನೆನ್ನವನೆನ್ನಯ್ಯಾಕೂಡಲಸಂಗಮದೇವಯ್ಯಾ.
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ,ಶಿವ ಶಿವಾ ಎಂದೋದಿಸಯ್ಯಾ.ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು,ಕೂಡಲಸಂಗಮದೇವಾ.
ಅತ್ತಲಿತ್ತ ಹೋಗದಂತೆ, ಹೆಳವನ ಮಾಡಯ್ಯಾ ತಂದೆ,ಸುತ್ತಿ ಸುಳಿದು ನೋಡದಂತೆ, ಅಂಧಕನ ಮಾಡಯ್ಯಾ ತಂದೆ,ಮತ್ತೊಂದ ಕೇಳದಂತೆ, ಕಿವುಡನ ಮಾಡಯ್ಯಾ ತಂದೆ,ನಿಮ್ಮ ಶರಣರ ಪಾದವಲ್ಲದೆಅನ್ಯ ವಿಷಯಕ್ಕೆಳಸದಂತೆ ಇರಿಸು, ಕೂಡಲಸಂಗಮದೇವಾ.
ಎನ್ನ ವಾಮ-ಕ್ಷೇಮ ನಿಮ್ಮದಯ್ಯಾ,ಎನ್ನ ಹಾನಿ-ವೃದ್ಧಿ ನಿಮ್ಮದಯ್ಯಾ,ಎನ್ನ ಮಾನಾಪಮಾನವೂ ನಿಮ್ಮದಯ್ಯಾ,ಬಳ್ಳಿಗೆ ಕಾಯಿ ದಿಮ್ಮಿತ್ತೆ, ಕೂಡಲಸಂಗಮದೇವಾ.
ಸಟೆಯಿಲ್ಲದಂತೆ, ಪ್ರಪಂಚವಿಲ್ಲದಂತೆ, ವೈಶಿಕವಿಲ್ಲದಂತೆ,ನಡೆಸಯ್ಯಾ ಲಿಂಗತಂದೆ.ಒಂದು ನಿಮಿಷವಾದಡೆಯೂ ನಿಮ್ಮ ಶರಣರ ಸಂಗದಲ್ಲಿರಿಸಯ್ಯಾ.ಬೇರೆ ಮತ್ತೆ ಅನ್ಯವ ತೋರದಿರಯ್ಯಾ.ಹೊಲಬುಗೆಟ್ಟೆನಯ್ಯಾ, ಕೂಡಲಸಂಗಮದೇವಾ.
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.ಕೂಡಲಸಂಗಮದೇವಾನಿಮ್ಮ ಮನೆಯ ಮಗನೆಂದೆನಿಸಯ್ಯಾ.
ಹುಟ್ಟೆಂದು ಲೋಕದಲ್ಲಿ ಹುಟ್ಟಿಸಿ ಇಳಿಯಬಿಟ್ಟಡೆನಿಮ್ಮ ನಗುವರಯ್ಯಾ.ಶಿವಬಟ್ಟೆಯಲೆನ್ನನು ಇರಿಸಯ್ಯಾ ಹರನೆ,ಹೊಲಬುಗೆಟ್ಟೆನು ಬಟ್ಟೆಯ ತೋರಯ್ಯಾ.ಹುಯ್ಯಲಿಟ್ಟೆನು, ಗಣಂಗಳು ಕೇಳಿರಯ್ಯಾ.ಕೂಡಲಸಂಗಮದೇವಯ್ಯ ಎನ್ನ ಕಾಡಿಹನಯ್ಯಾ.
ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ,ಅಕಟಕಟಾ ಶಿವ ನಿನಗಿನಿತು ಕೃಪೆಯಿಲ್ಲ,ಏಕೆ ಹುಟ್ಟಿಸಿದೆ, ಇಹಲೋಕ ದುಃಖಿಯಪರಲೋಕದೂರನ ಏಕೆ ಹುಟ್ಟಿಸಿದೆಕೂಡಲಸಂಗಮದೇವಾ ಕೇಳಯ್ಯಾ,ಎನಗಾಗಿ ಮತ್ತೊಂದು ತರುಮರನಿಲ್ಲವೆ.
ನರ ಕೂರಂಬಿನಲೆಚ್ಚ, ಅವಂಗೊಲಿದೆಯಯ್ಯಾ,ಅರಳಂಬಿನಲೆಚ್ಚ ಕಾಮನನುರುಹಿದೆ.ಇರುಳು ಹಗಲೆನ್ನದೆ ಪ್ರಾಣಘಾತಕವ ಮಾಡಿದಬೇಡನ ಕೈಲಾಸಕೊಯ್ದೆಯಯ್ಯಾ,ಎನ್ನನೇತಕೊಲ್ಲೆ ಕೂಡಲಸಂಗಮದೇವಾ.
ನೀನೊಲಿದಡೆ ಕೊರಡು ಕೊನರುವುದಯ್ಯಾ,ನೀನೊಲಿದಡೆ ಬರಡು ಹಯನಹುದಯ್ಯಾ,ನೀನೊಲಿದಡೆ ವಿಷವೆಲ್ಲ ಅಮೈತವಹುದಯ್ಯಾ,ನೀನೊಲಿದಡೆ ಸಕಲ ಪಡಿಪದಾರ್ಥಇದಿರಲ್ಲಿರ್ಪುವು ಕೂಡಲಸಂಗಮದೇವಾ.
ಮೇರುಗುಣವನರಸುವುದೆ ಕಾಗೆಯಲ್ಲಿಪರುಷಗುಣವನರಸುವುದೆ ಕಬ್ಬುನದಲ್ಲಿಸಾಧುಗುಣವನರಸುವುದೆ ಅವಗುಣಿಯಲ್ಲಿಚಂದನಗುಣವನರಸುವುದೆ ತರುಗಳಲ್ಲಿಸರ್ವಗುಣಸಂಪನ್ನ ಲಿಂಗವೆ, ನೀನೆನ್ನಲ್ಲಿಅವಗುಣವನರಸುವರೆ ಕೂಡಲಸಂಗಮದೇವಾ.
ಭವಭವದಲ್ಲಿ ಎನ್ನ ಮನವು ಸಿಲುಕದೆಭವಭವದಲ್ಲಿ ಎನ್ನ ಮನವು ಕಟ್ಟದೆಭವಸಾಗರದಲ್ಲಿ ಮುಳುಗದೆಭವರಾಟಳದೊಳು ತುಂಬದೆ ಕೆಡಹದೆಭವವಿರಹಿತ ನೀನು, ಅವಧಾರುಕರುಣಿಸು ಕೂಡಲಸಂಗಮದೇವಾ.
ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ,ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ !ಕರುಣಾಕರ, ಅಭಯಕರ, ವರದ,ನೀ ಕರುಣಿಸಯ್ಯಾ.ಸಂಸಾರಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ,ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು,ಭಕ್ತಜನಮನೋವಲ್ಲ ಕೂಡಲಸಂಗಮದೇವಾ.
ಮಡಕೆಯ ಮಾಡುವಡೆ ಮಣ್ಣೆ ಮೊದಲು,ತೊಡಿಗೆಯ ಮಾಡುವಡೆ ಹೊನ್ನೆ ಮೊದಲು,ಶಿವಪಥವನರಿವಡೆ ಗುರುಪಥವೆ ಮೊದಲು,ಕೂಡಲಸಂಗಮದೇವರನರಿವಡೆಶರಣರ ಸಂಗವೆ ಮೊದಲು.
ನೋಡಿ ನೋಡಿ ಮಾಡುವ ನೇಮ ಸಲ್ಲವು, ಸಲ್ಲವು.ತನುವುದ್ದೇಶ, ಮನವುದ್ದೇಶವಾಗಿಮಾಡುವ ನೇಮ ಸಲ್ಲವು, ಸಲ್ಲವು.ಗುರುಪಥವ ಮೀರಿ ಮಾಡುವ ನೇಮ ಸಲ್ಲವು, ಸಲ್ಲವು.ಕೂಡಲಸಂಗಮದೇವಯ್ಯಾಇವು ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು.
ಗುರುವಚನವಲ್ಲದೆ ಲಿಂಗವೆಂದೆನಿಸದು,ಗುರುವಚನವಲ್ಲದೆ ಜಂಗಮವೆಂದೆನಿಸದು,ಗುರುವಚನವಲ್ಲದೆ ನಿತ್ಯವೆಂದೆನಿಸದು,ಗುರುವಚನವಲ್ಲದೆ ನೇಮವೆಂದೆನಿಸದು.ತಲೆಯಿಲ್ಲದ ಅಟ್ಟೆಗೆ ಪಟ್ಟವ ಕಟ್ಟುವಭಯ ಭ್ರಷ್ಟರ ಮೆಚ್ಚುವನೆ,ನಮ್ಮ ಕೂಡಲಸಂಗಮದೇವ.
ಮುನ್ನ ಮಾಡಿದ ಪಾಪವೆಂತು ಹೋಹುದೆಂದು ಚಿಂತಿಸಬೇಡ.ಕಹಿ ಸೋರೆಯ ಕಾಯ ತಂದು ವಿಭೂತಿಯ ತುಂಬಿದಡೆಸಿಹಿಯಾಗದೆ ಮೂರು ದಿವಸಕ್ಕಯ್ಯಾಹಲವು ಕಾಲ ಕೊಂದ ಸೂನೆಗಾರನ ಕತ್ತಿಯಾದಡೇನುಪರುಷ ಮುಟ್ಟಲಿಕೆ ಹೊನ್ನಾಗದೆ ಅಯ್ಯಾಲಲಾಟದಲ್ಲಿ ವಿಭೂತಿ ಬರೆಯಲಿಕೆ ಪಾಪ ಪಲ್ಲಟವಾಗದೆಕೂಡಲಸಂಗಮದೇವಾ.
ಕರಿಯಂಜುವುದು ಅಂಕುಶಕ್ಕಯ್ಯಾ,ಗಿರಿಯಂಜÅವುದು ಕುಲಿಶಕ್ಕಯ್ಯಾ,ತಮಂಧವಂಜುವುದು ಜ್ಯೋತಿಗಯ್ಯಾ,ಕಾನನವಂಜುವುದು ಬೇಗೆಗಯ್ಯಾ,ಪಂಚಮಹಾಪಾತಕವಂಜುವುದುಕೂಡಲಸಂಗನ ನಾಮಕ್ಕಯ್ಯಾ.
ಜಪತಪ ನಿತ್ಯನೇಮವೆನಗುಪದೇಶ,ನಿಮ್ಮ ನಾಮವೆನಗೆ ಮಂತ್ರ,ಶಿವನಾಮವೆನಗೆ ತಂತ್ರ,ಕೂಡಲಸಂಗಮದೇವಯ್ಯಾನಿಮ್ಮ ನಾಮವೆನಗೆ ಕಾಮಧೇನು.
ಅಕಟಕಟಾ ಬೆಡಗು ಬಿನ್ನಾಣವೆಂಬುದೇನೊ !ಓಂ ನಮಃ ಶಿವಾಯ ಎಂಬುದೇ ಮಂತ್ರ,ಓಂ ನಮಃ ಶಿವಾಯ ಎಂಬುದೇ ತಂತ್ರ,ನಮ್ಮ ಕೂಡಲಸಂಗಮದೇವರ ನೆನೆವುದೆ ಮಂತ್ರ.
ವಶ್ಯವ ಬಲ್ಲೆವೆಂದೆಂಬಿರಯ್ಯಾ,ಬುದ್ಧಿಯನರಿಯದ ಮನುಜರು ಕೇಳಿರಯ್ಯಾ.ವಶ್ಯವಾವುದೆಂದರಿಯದೆ ಮರುಳುಗೊಂಬಿರಿ,ಎಲೆ ಗಾವಿಲ ಮನುಜರಿರಾ.ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯಕೂಡಲಸಂಗಮದೇವಾ.
ಭವಬಂಧನ ದುರಿತಂಗಳ ಗೆಲುವಡೆಓಂ ನಮಃ ಶಿವಶರಣೆಂದಡೆ ಸಾಲದೆಹರ ಹರ ಶಂಕರ, ಶಿವ ಶಿವ ಶಂಕರ,ಜಯ ಜಯ ಶಂಕರ ಶರಣೆನುತ್ತಿದ್ದೇನೆ.ಎನ್ನ ಪಾತಕ ಪರಿಹರ,ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ.
ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ,ಓಂ ನಮಃ ಶಿವಾಯ, ಓಂ ನಮಃ ಶಿವಾಯಎನಗಿದೆ ಮಂತ್ರ, ಇದೇ ಜಪ.ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ.
ಓಂ ನಮಃ ಶಿವಾಯಎಂಬ ಮಂತ್ರವ ಮೀರಲಮ್ಮದೆ ನಿಂದವು ವೇದ,ಓಂ ನಮಃ ಶಿವಾಯಎಂಬ ಮಂತ್ರವ ಮೀರಲಮ್ಮದೆ ನಿಂದವು ಶಾಸ್ತ್ರ,ಓಂ ನಮಃ ಶಿವಾಯಎಂಬ ಮಂತ್ರವ ಮೀರಲಮ್ಮದೆ ನಿಂದವು ತರ್ಕ.ಭಯಂಕರ ಭ್ರಮೆಗೊಂಡಿತ್ತು ಮಂತ್ರ-ತಂತ್ರ,ಶಿವನಂತುವನರಿಯದೆ ಚಿಂತಿಸುತ್ತಿದ್ದಿತ್ತು ಲೋಕ,ಕೂಡಲಸಂಗಮದೇವ ಶ್ವಪಚನ ಮೆರೆದಡೆಜಾತಿಭೇದವ ಮಾಡಲಮ್ಮವು.
ಬಿಳಿಯ ಕರಿಕೆ, ಕಣಿಗಿಲೆಲೆಯ,ತೊರೆಯ ತಡಿಯ ಮಳಲ ತಂದು,ಗೌರಿಯ ನೋನುವ ಬನ್ನಿರೆ.ಚಿಕ್ಕ ಚಿಕ್ಕ ಮಕ್ಕಳೆಲ್ಲರು ನೆರೆದುಅನುಪಮದಾನಿ ಕೂಡಲಸಂಗಮದೇವ ಗಂಡನಾಗಬೇಕೆಂದು.
ಎಮ್ಮವರು ಬೆಸಗೊಂಡಡೆ ಶುಭಲಗ್ನವೆನ್ನಿರಯ್ಯಾ,ರಾಶಿಕೂಟ ಋಣಸಂಬಂಧವುಂಟೆಂದು ಹೇಳಿರಯ್ಯಾ,ಚಂದ್ರಬಲ ತಾರಾಬಲವುಂಟೆಂದು ಹೇಳಿರಯ್ಯಾ,ನಾಳಿನ ದಿನಕಿಂದನ ದಿನ ಲೇಸೆಂದು ಹೇಳಿರಯ್ಯಾ,ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯಾ.
ಪಾತಕ ಶತಕೋಟಿಯನೊರಸಲುಸಾಲದೆ ಒಂದು ಶಿವನ ನಾಮಸಾಲದೆ ಒಂದು ಹರನ ನಾಮಕೂಡಲಸಂಗಮದೇವಾನಿಮ್ಮ ಉಂಡಿಗೆಯ ಪಶುವ ಮಾಡಿದೆಯಾಗಿ.
ಲಿಂಗದ ಉಂಡಿಗೆಯ ಪಶುವಾನಯ್ಯಾ,ವೇಷಧಾರಿಯಾನು, ಉದರಪೋಷಕ ನಾನಯ್ಯಾ,ಕೂಡಲಸಂಗನ ಶರಣರ ಧರ್ಮದ ಕವಿಲೆಯಾನು.
ನಮಃ ಶಿವಾಯ ನಮಃ ಶಿವಾಯ ನಮಃ ಶಿವಾಯಶರಣೆಂದಿತ್ತು ಲಲಾಟಲಿಖಿತ,ಬರೆದ ಬಳಿಕ ಪಲ್ಲಟವ ಮಾಡಬಾರದು.ಎನ್ನ ಉರದ ಉಂಡಿಗೆ, ಶಿರದ ಅಕ್ಷರಕೂಡಲಸಂಗಯ್ಯಾ ಶರಣೆಂದಿತ್ತು.
ಅಡ್ಡ ವಿಭೂತಿುಲ್ಲದವರ ಮುಖಹೊಲ್ಲ, ನೋಡಲಾಗದು.ಲಿಂಗದೇವನಿಲ್ಲದಠಾವು ನರವಿಂಧ್ಯ, ಹೊಗಲಾಗದು.ದೇವಭಕ್ತರಿಲ್ಲದೂರು ಸಿನೆ ಹಾಳು,ಕೂಡಲಸಂಗಮದೇವಾ.
ಅಡ್ಡ ತ್ರಿಪುಂಡ್ರದ, ಮಣಿಮಕುಟವೇಷದಶರಣರ ಕಂಡಡೆ ನಂಬುವುದೆನ್ನ ಮನವು,ನಚ್ಚುವುದೆನ್ನ ಮನವು, ಸಂದೇಹವಿಲ್ಲದೆ.ಇವಿಲ್ಲದವರ ಕಂಡಡೆ ನಂಬೆ ಕೂಡಲಸಂಗಮದೇವಾ.
ಆರಾಧ್ಯ ಪ್ರಾಣಲಿಂಗವೆಂದರಿದು,ಪೂರ್ವಗುಣವಳಿದು ಪುನರ್ಜಾತನಾದ ಬಳಿಕ,ಸಂಸಾರಬಂಧುಗಳೆನ್ನವರೆಂದಡೆನಂಟುಭಕ್ತಿ ನಾಯಕನರಕ-ಇಂತೆಂದುದು ಕೂಡಲಸಂಗನ ವಚನ.
ತಾಳಮರದ ಕೆಳಗೆ ಒಂದು ಹಾಲ ಹರಮಿದ್ದಡೆಅದ ಹಾಲಹರವಿಯೆನ್ನರು, ಸುರೆಯ ಹರವಿಯೆಂಬರು.ಈ ಭಾವನಿಂದೆಯ ಮಾಣಿಸಾಕೂಡಲಸಂಗಮದೇವಾ.
ಸುಪಥಮಂತ್ರದುಪದೇಶವ ಕಲಿತು, ಯುಕ್ತಿಗೆಟ್ಟು ನಡೆವಿರಯ್ಯಾ,ತತ್ತ್ವಮಸಿ ಎಂಬುದನರಿದು ಕತ್ತಲೆಗೆ ಓಡುವಿರಯ್ಯಾ.ವೇದವಿಪ್ರರ ವಿಚಾರಿಸಿ ನೋಡಲು,ಉಪದೇಶಪರೀಕ್ಷೆ ನರಕವೆಂದುದುಕೂಡಲಸಂಗನ ವಚನಸೂಚನೆ.
ಕುಂಬಳದ ಕಾುಗೆ ಕಬ್ಬುನದ ಕಟ್ಟ ಕೊಟ್ಟಡೆಕೊಳೆವುದಲ್ಲದೆ ಬಲುಹಾಗಬಲ್ಲುದೆಅಳಿಮನದವಂಗೆ ದೀಕ್ಷೆಯ ಕೊಟ್ಟಡೆಭಕ್ತಿಯೆಂತಹುದು ಮುನ್ನಿನಂತೆ.ಕೂಡಲಸಂಗಯ್ಯಾಮನಹೀನನ ಮೀಸಲ ಕಾ್ದುರಿಸಿದಂತೆ.
ಸಗಣಿಯ ಬೆನಕಂಗೆ ಸಂಪಗೆಯರಳಲ್ಲಿ ಪೂಜಿಸಿದಡೆರಂಜನೆಯಹುದಲ್ಲದೆ ಅದರ ಗಂಜಳ ಬಿಡದಣ್ಣಾ,ಮಣ್ಣ ಪುತ್ಥಳಿಯ ಮಾಣದೆ ಜಲದಲ್ಲಿ ತೊಳೆದಡೆನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣಾ.ಲೋಕದ ಮಾನವಂಗೆ ಶಿವದೀಕ್ಷೆಯ ಕೊಟ್ಟಡೆಕೆಟ್ಟವನೇಕೆ ಸದ್ಭಕ್ತನಹನು ಕೂಡಲಸಂಗಮದೇವಾ.
ಕಬ್ಬುನದ ಕೋಡಗವ ಪರುಷ ಮುಟ್ಟಲು,ಹೊನ್ನಾದಡೇನು ಮತ್ತೇನಾದಡೇನುತನ್ನ ಮುನ್ನಿನ ರೂಹ ಬಿಡದನ್ನಕ್ಕಕೂಡಲಸಂಗಮದೇವಾ,ನಿಮ್ಮ ನಂಬಿಯೂ ನಂಬದ ಡಂಬಕರುಗಳಯ್ಯಾ.
Kannada vachanagalu
ತನುವಿನಲೊಂದಿಟ್ಟು ಮನದಲೆರಡಿಟ್ಟಡೆ,ಬಲ್ಲನೊಲ್ಲನಯ್ಯಾ, ಲಿಂಗವು ಬಲ್ಲನೊಲ್ಲನಯ್ಯಾ.ಪರಚಿಂತೆಯನೊಲ್ಲನೊಲ್ಲಕೂಡಲಸಂಗಮದೇವ.
ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರಬಲ್ಲನೊಲ್ಲನಯ್ಯಾ ಲಿಂಗವು,ಅವರು ಪಥಕ್ಕೆ ಸಲ್ಲರು ಸಲ್ಲರಯ್ಯಾ.ಒಳಹೊರಗೊಂದಾಗದವರಿಗೆಅಳಿಯಾಸೆದೋರಿ ಬೀಸಾಡುವನವರಜಗದೀಶ ಕೂಡಲಸಂಗಮದೇವ.
ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ,ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊತನುವಿನಲ್ಲಿ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿಮನದೊಳಗೆ [ಮನದೊ]ಡೆಯನಿದ್ದಾನೊ, ಇಲ್ಲವೊಇಲ್ಲ, ಕೂಡಲಸಂಗಮದೇವಾ.
ಓಡೆತ್ತ ಬಲ್ಲುದು ಅವಲಕ್ಕಿಯ ಸವಿಯಕೋಡುಗ ಬಲ್ಲುದೆ ಸೆಳೆಮಂಚದ ಸುಖವಕಾಗೆ ನಂದನವನದೊಳಗಿದ್ದಡೇನು,ಕೋಗಿಲೆಯಾಗಬಲ್ಲುದೆ ಹೇಳಾಕೊಳನ ತಡಿಯಲೊಂದು ಹೊರಸು ಕುಳ್ಳಿರ್ದಡೇನು,ಕಳಹಂಸಿಯಾಗಬಲ್ಲುದೆ, ಕೂಡಲಸಂಗಮದೇವಾ.
ಎನಿಸು ಕಾಲ ಕಲ್ಲು ನೀರೊಳಗಿದ್ದಡೇನು,ನೆನೆದು ಮೃದುವಾಗಬಲ್ಲುದೆಎನಿಸು ಕಾಲ ನಿಮ್ಮ ಪೂಜಿಸಿ ಏವೆನಯ್ಯಾ,ಮನದಲ್ಲಿ ದೃಡವಿಲ್ಲದನ್ನಕ್ಕನಿದಾನವ ಕಾಯಿದಿರ್ದ ಬೆಂತರನಂತೆಅದರ ವಿಧಿ ಎನಗಾಯಿತ್ತು, ಕೂಡಲಸಂಗಮದೇವಾ.
ಸಂತವಿದ್ದ ಮನೆಗೆ ಕೊಂತವ ತಂದಂತೆಇದನೆಂತು ಸಂತೈಸುವೆನುಸಂತೆಯ ಗುಡಿಲ ಸೂಳೆಗೆ ಕೊಂತವಳವಡುವುದೆಕೂಡಲಸಂಗಮದೇವರ ಮಹತ್ತುಆರಿಗೂ ಆಳವಡದು.
ಕೂಸುಳ್ಳ ಸೂಳೆ ಧನದಾಸೆಗೊತ್ತೆಯ ಕೊಂಡಡೆಕೂಸಿಂಗಲ್ಲ, ಬೊಜಗಂಗಲ್ಲ.ಕೂಸನೊಮ್ಮೆ ಸಂತವಿಡುವಳು, ಬೊಜಗನನೊಮ್ಮೆ ನೆರೆವಳು.ಧನದಾಸೆ ಬಿಡದು ಕೂಡಲಸಂಗಮದೇವಾ.
ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ !ಉಡುವಿನ ನಾಲಗೆಯಂತೆ ಎರಡಾದಡೆಕೂಡಲಸಂಗಯ್ಯ ಮೆಚ್ಚುವನೆ
ಭಕ್ತರ ಕಂಡಡೆ ಬೋಳರಪ್ಪಿರಯ್ಯಾ,ಸವಣರ ಕಂಡಡೆ ಬತ್ತಲೆಯಪ್ಪಿರಯ್ಯಾ,ಹಾರುವರ ಕಂಡಡೆ ಹರಿನಾಮವೆಂಬಿರಯ್ಯಾ,ಅವರವರ ಕಂಡಡೆ ಅವರವರಂತೆಸೂಳೆಗೆ ಹುಟ್ಟಿದವರ ತೋರದಿರಯ್ಯಾ.ಕೂಡಲಸಂಗಯ್ಯನ ಪೂಜಿಸಿ, ಅನ್ಯದೈವಂಗಳಿಗೆರಗಿಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯಾ.
ಗಂಡ ಶಿವಲಿಂಗದೇವರ ಭಕ್ತ,ಹೆಂಡತಿ ಮಾರಿ ಮಸಣಿಯ ಭಕ್ತೆ.ಗಂಡ ಕೊಂಬುದು ಪಾದೋದಕ-ಪ್ರಸಾದ,ಹೆಂಡತಿ ಕೊಂಬುದು ಸುರೆ-ಮಾಂಸ.ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿಹೆಂಡದ ಮಡಿಕೆಯ ಹೊರಗೆ ತೊಳೆದಂತೆಕೂಡಲಸಂಗಮದೇವಾ.
ಹಾವಡಿಗನು ಮೂಕೊರತಿಯು:ತನ್ನ ಕೈಯಲ್ಲಿ ಹಾವು,ಮಗನ ಮದುವೆಗೆ ಶಕುನವ ನೋಡಹೋಹಾಗಇದಿರಲೊಬ್ಬ ಮೂಕೊರತಿಯ ಹಾವಡಿಗನ ಕಂಡು,ಶಕುನ ಹೊಲ್ಲೆಂಬ ಚದುರನ ನೋಡಾ.ತನ್ನ ಸತಿ ಮೂಕೊರತಿ, ತನ್ನ ಕೈಯಲ್ಲಿ ಹಾವು,ತಾನು ಮೂಕೊರೆಯ.ತನ್ನ ಬ್ಥಿನ್ನವನರಿಯದೆ ಅನ್ಯರನೆಂಬಕುನ್ನಿಯನೇನೆಂಬೆ ಕೂಡಲಸಂಗಮದೇವಾ.
ಅಂಗದಿಚ್ಛೆಗೆ ಮದ್ಯಮಾಂಸವ ತಿಂಬರು,ಕಂಗಳಿಚ್ಛೆಗೆ ಪರವಧುವ ನೆರೆವರು.ಲಿಂಗಲಾಂಛನಧಾರಿಯಾದಲ್ಲಿ ಫಲವೇನುಲಿಂಗಪಥವ ತಪ್ಪಿ ನಡೆವವರುಜಂಗಮಮುಖದಿಂದ ನಿಂದೆ ಬಂದಡೆಕೊಂಡ ಮಾರಿಂಗೆ ಹೋಹುದು ತಪ್ಪದುಕೂಡಲಸಂಗಮದೇವಾ.
ಶಿವಜನ್ಮದಲ್ಲಿ ಹುಟ್ಟಿ, ಲಿಂಗೈಕ್ಯರಾಗಿ,ತನ್ನ ಅಂಗದ ಮೇಲೆ ಲಿಂಗವಿರುತಿರಲು,ಅನ್ಯರನೆ ಹಾಡಿ, ಅನ್ಯರನೆ ಹೊಗಳಿ,ಅನ್ಯರ ವಚನವ ಕೊಂಡಾಡಲು, ಕರ್ಮ ಬಿಡದು, ಭವಬಂಧನ !ಶ್ವಾನಯೋನಿಯಲ್ಲಿ ಬಪ್ಪುದು ತಪ್ಪದು !ಇದು ಕಾರಣ, ಕೂಡಲಸಂಗಮದೇವಾ,ನಿಮ್ಮ ನಂಬಿಯೂ ನಂಬದ ಡಂಬಕರಿಗೆಮಳಲ ಗೋಡೆಯನಿಕ್ಕಿ, ನೀರಲ್ಲಿ ತೊಳೆದಂತಾುತ್ತಯ್ಯಾ.
ಅರ್ಥರೇಖೆುದ್ದಲ್ಲಿ ಫಲವೇನು, ಆಯುಷ್ಯರೇಖೆ ಇಲ್ಲದನ್ನಕ್ಕರಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನುಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನುಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನುನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿಲಿಂಗವಿದ್ದು ಫಲವೇನು ! ಶಿವಪಥವನರಿಯದನ್ನಕ್ಕ.
ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ,ಲಿಂಗದ ಮೇಲೆ ನಿಷೆ*ುಲ್ಲದ ಭಕ್ತ,ಇದ್ದಡೇನೊ ಶಿವ ಶಿವಾ ಹೋದಡೇನೊಕೂಡಲಸಂಗಮದೇವಯ್ಯಾಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ.
ಅವಳ ವಚನ ಬೆಲ್ಲದಂತೆ, ಹೃದಯದಲಿಪ್ಪುದು ನಂಜು ಕಂಡಯ್ಯಾ.ಕಂಗಳಲೊಬ್ಬನ ಕರೆವಳು, ಮನದಲೊಬ್ಬನ ನೆರೆವಳು.ಕೂಡಲಸಂಗಮದೇವ ಕೇಳಯ್ಯಾ,ಮಾನಿಸಗಳ್ಳೆಯ ನಂಬದಿರಯ್ಯಾ.
ಹಾದರಕ್ಕೆ ಹೋದಡೆ, ಕಳ್ಳದಮ್ಮವಾುತ್ತು;ಹಾಳು ಗೋಡೆಗೆ ಹೋದಡೆ, ಚೇಳೂರಿತ್ತು;ಅಬ್ಬರವ ಕೇಳಿ ತಳವಾರ ಉಟ್ಟ ಸೀರೆಯ ಸುಲಿದ;ನಾಚಿ ಹೋದಡೆ ಮನೆಯ ಗಂಡ ಬೆನ್ನ ಬಾರನೆತ್ತಿದ,ಅರಸು ಕೂಡಲಸಂಗಮದೇವ ದಂಡವ ಕೊಂಡ.